Saturday, 27 October 2018

ಮಧುರ ಚೆನ್ನರು ಕಟ್ಟಿದ ಜಾನಪದ ಲೋಕ

ಮಧುರಚೆನ್ನರ ಸಾಹಿತ್ಯ
ಹಲಸಂಗಿ ಗೆಳೆಯರ ಕೊಡುಗೆಯ ಆಳ ಸಂಪಾದಿಸಿ
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಲಸಂಗಿಯ ಗೆಳೆಯರು ಮೊದಲ ಬಾರಿಗೆ ಜನಪದ ಸಾಹಿತ್ಯವನ್ನು ಪ್ರಕಟಿಸಿ ಪ್ರಸಾರ, ಪ್ರಚಾರ ಮಾಡುವುದ ರೊಂದಿಗೆ ಕನ್ನಡ ಅಕ್ಷರಲೋಕದೊಳಗೆ ದೇಸೀಕಾವ್ಯಕ್ಕೆ ಉತ್ಕøಷ್ಟ ಸ್ಥಾನ ನೀಡಿದರು. ಕಳೆದ ಶತಮಾನದ ಮೂವತ್ತರ ದಶಕದ ಅರ್ಧಭಾಗವು ಜನಪದ ಸಾಹಿತ್ಯ ಸಂಗ್ರಹ ಕಾರ್ಯದ ಕ್ರಿಯಾಶೀಲ ವರ್ಷಗಳಾಗಿ ಕನ್ನಡ ಜನಪದ ಸಾಹಿತ್ಯ ಇತಿಹಾಸದಲ್ಲಿ ದಾಖಲಾದುದು. ಪ್ರತಿ ಎರಡು ವರ್ಷಕ್ಕೊಮ್ಮೆ ಒಂದರಂತೆ ಒಂದೊಂದು ವಿಶಿಷ್ಟ ಜನಪದ ಸಂಕಲನಗಳನ್ನು ಕೊಟ್ಟ ‘ಹಲಸಂಗಿ ಗೆಳೆಯರು’ ಮೊದಲ ಬಾರಿಗೆ ಕನ್ನಡ ದೇಸೀಕಾವ್ಯದ ಅಪೂರ್ವ ಪ್ರವೇಶವನ್ನು ಸಾರಿದರು. ಗರತಿಯ ಹಾಡು(1931), ಜೀವನ ಸಂಗೀತ(1933)ಗಳಂತೆ ‘ಮಲ್ಲಿಗೆ ದಂಡೆ’(1935) ಕೃತಿಯೂ ಜನಪದ ಗೀತ ಸಂಕಲನವಾಗಿ ಕನ್ನಡ ಜನಪದ ಸಾಹಿತ್ಯಕ್ಕೆ ತನ್ನ ಅಪರೂಪದ ಕೊಡುಗೆ ನೀಡಿತು. ಈ ಬಗೆಯ ಕಾರ್ಯದಲ್ಲಿ ಲಾವಣಿಕಾರರ, ಗರತಿಯರ ಹಾಡುಗಳಿಗೆ ಪ್ರಭಾವಿತರಾಗಿದ್ದ ಮಧುರಚೆನ್ನ, ಪಿ.ಧೂಲಾ, ಕಾಪಸೆ ರೇವಪ್ಪ, ಸಿಂಪಿ ಲಿಂಗಣ್ಣನವರು ಮಾಡಿದ ಸಾಧನೆ ಅಪೂರ್ವವಾದುದು. ಹಲಸಂಗಿ, ಚಡಚಣ, ಇಂಡಿ ಮೊದಲಾದ ಪ್ರದೇಶಗಳಲ್ಲಿ ಜನಪ್ರಿಯವಾಗಿದ್ದ ಈ ಹಾಡುಗಳ ಬಗ್ಗೆ 1923ರಲ್ಲಿ ವಿಜಯಪುರದಲ್ಲಿ ನಡೆದ 9 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉಪನ್ಯಾಸ ನೀಡಿ ಈ ಹಾಡುಗಳ ಖ್ಯಾತಿಯನ್ನು ಸಾರಿದರು.

ಡಾ.ಗುರುಲಿಂಗ ಕಾಪಸೆಯವರು ‘ಹಲಸಂಗಿ ಹಾಡು’(2000) ಪ್ರಸ್ತಾವನೆಯಲ್ಲಿ ಹಲಸಂಗಿ ಭಾಗದ ಲಾವಣಿಕಾರರು ಕನ್ನಡ ಕವಿಗಳನ್ನು ಪ್ರಭಾವಿಸಿಕೊಂಡ ಬಗ್ಗೆ ಹೀಗೆ ಬರೆಯುತ್ತಾರೆ. “ಹಲಸಂಗಿಯ ಸುಪ್ರಸಿದ್ದ ಲಾವಣಿಕಾರನಾಗಿದ್ದ ಖಾಜಾಭಾಯಿ ತೀರಿಕೊಂಡ ಮೇಲೆ, ಅವನ ಲಾವಣಿಗಳು ಇನ್ನೂ ಸ್ವಾರಸ್ಯಕರವಾಗಿ ಹಾಡಲ್ಪಡುತ್ತಿದ್ದವು. ಖಾಜಾಭಾಯಿ ತೀರಿಕೊಂಡದ್ದು 1924ರಲ್ಲಿ. ಜೀವನ ಸಂಗೀತದಲ್ಲಿ ಸಂಗ್ರಹಿತವಾದ ಲಾವಣಿಗಳು ಮೂಲ ಕವಿಗಳಿಂದಲೇ ಪಡೆದವುಗಳಲ್ಲ. ಆಗಿನ ಕಾಲದ ಬೇರೆ ಬೇರೆ ಹಾಡುಗಾರರಿಂದ ದೊರಕಿಸಿದಂತಹವು. ಸಂಗ್ರಹಕಾರರು ತಿಳಿಸಿರುವಂತೆ ಲಾವಣಿಕಾರ ಕುಬ್ಬಣ್ಣನವರ ಮಕ್ಕಳಾದ ವೀರಭದ್ರಪ್ಪನವರು, ವಿಶೇಷವಾಗಿ ಹಲಸಂಗಿಯವರೇ ಆದ ಓಲೇಕಾರ ರಾಮಚಂದ್ರಪ್ಪನವರು ಲಾವಣಿಗಳನ್ನು ಹೇಳಿಕೊಟ್ಟಿದ್ದಾರೆ. ಓಲೇಕಾರ ರಾಮಚಂದ್ರಪ್ಪನವರು ಆ ಕಾಲದ ಸುಪ್ರಸಿದ್ದ ಹಾಡುಗಾರರು. ಈತನ ಕಂಚಿನ ಕಂಠ ಎಂಥವರನ್ನು ಆಕರ್ಷಿಸುತ್ತಿತ್ತು, ಬೆರಗುಗೊಳಿಸುತ್ತಲಿತ್ತು. 1936ರಲ್ಲಿ ರಾಮಕೃಷ್ಣ ಪರಮಹಂಸರ ಜನ್ಮ ಶತಮಾನೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಹಲಸಂಗಿಗೆ ಆಗಮಿಸಿದ್ದ ಶಿವರಾಮ ಕಾರಂತರು ಓಲೇಕಾರ ರಾಮಚಂದ್ರನಿಂದ ಲಾವಣಿಗಳನ್ನು ಕೇಳಿ ತಮ್ಮನ್ನು ತಾವೇ ಮರೆತರು. ಅಷ್ಟೇ ಅಲ್ಲ ಆತನನ್ನು ತಮ್ಮ ಪುತ್ತೂರಿಗೂ ಕರಿಸಿ, ಹಾಡಿಸಿ, ಕೇಳಿ ಸಂತೋಷಪಟ್ಟರು. ಈ ವಿಷಯವನ್ನು ಕಾರಂತರೇ ತಮ್ಮ ‘ಹುಚ್ಚು ಮನಸ್ಸಿನ ಹತ್ತು ಮುಖಗಳು’ ಕೃತಿಯಲ್ಲಿ ಪ್ರಸ್ತಾಪಿಸಿದ್ದಾರೆ. ರಾಮಚಂದ್ರನ ಲಾವಣಿಗಳನ್ನು ಕೇಳಲು ಆ ದಿನ ಕಲೆತ ಹಿಂದೂ ಮುಸಲ್ಮಾನರ ಒಕ್ಕೂಟವು ನನ್ನ ಸ್ಮರಣೆಯಲ್ಲಿ ಬಹಳ ಕಾಲ ಇತ್ತು. ನಾನು ಮುಂದೊಮ್ಮೆ ಅವನನ್ನು ನಮ್ಮ ಊರಿಗೂ ಕರೆಯಿಸಿಕೊಂಡು ಹಾಡಿಸಿ ಕೇಳಿದ್ದೆ. ಒಮ್ಮೆ ಅವನಿಂದ ನಮ್ಮ ಶಾಲೆಯ ಹುಡುಗರಿಗೂ ಲಾವಣಿಗಳನ್ನು ಕಲಿಸುವ ಏರ್ಪಾಡು ಮಾಡಿದ್ದೆ. ಇದು ಅಂದಿನ ಹಲಸಂಗಿ ಲಾವಣಿ ಹಾಡುಗಾರನ ಅಗ್ಗಳಿಕೆಯನ್ನು ಸೂಚಿಸುತ್ತದೆ. ಓಲೇಕಾರ ರಾಮಚಂದ್ರನಂತೆ ಓಲೇಕಾರ ಮಾದಣ್ಣನೂ ಲಾವಣಿಗಳನ್ನು ಸೊಗಸಾಗಿ ಹಾಡುತ್ತಿದ್ದನು. ಮಧುರಚೆನ್ನರ ಆತ್ಮೀಯ ಗೆಳೆಯನಾದ ಈತನಿಂದ ಆ ಮುಂದಿನ ತಲೆಮಾರಿನವರು ಲಾವಣಿಗಳನ್ನು ಕೇಳಿ ಸಂತೋಷಪಟ್ಟಿದ್ದಾರೆ. ಹಲಸಂಗಿಯ ಗಾಢ ಸಂಬಂಧ ಹೊಂದಿದ್ದ ವರಕವಿ ದ.ರಾ.ಬೇಂದ್ರೆಯವರ ‘ಸಚ್ಚಿದಾನಂದ’ ದಂಥ ಕವಿತೆಗಳು ಲಾವಣಿಯ ಲಯವನ್ನು ಅಳವಡಿಸಿಕೊಂಡಿದ್ದನ್ನು ಗಮನಿಸಬಹುದು.”

ಹಲಸಂಗಿ ಗೆಳೆಯರು ಕೈಗೊಂಡ ಆ ಸಂದರ್ಭದ ಜಾನಪದ ಸಂಗ್ರಹ, ಸಂಪಾದನೆ ಪ್ರಚಾರ ಕಾರ್ಯ ಜನಮುಖಿ ಸಾಹಿತ್ಯಕ್ಕೆ ಒಂದು ಬಗೆಯಲ್ಲಿ ವ್ಯಾಪಕತೆ ತಂದಿತು. ಮೊದಲ ಬಾರಿಗೆ ಜಾನ್ ಫೇತ್ವುದಲ್ ಫ್ಲೀಟ್ ರ ಸಂಗ್ರಹಿಸಿದ್ದ ಆಯ್ದ ಲಾವಣಿಗಳು ‘ಇಂಡಿಯನ್ ಎಂಟಿಕ್ವೆರಿ’ 1885-1888ರಲ್ಲಿ ಪ್ರಕಟವಾಗಿದ್ದವು. ಆದರೆ ಇವುಗಳಿಗೆ ಕನ್ನಡದಲ್ಲಿ ವ್ಯಾಪಕತೆ ತಂದುಕೊಟ್ಟ ಸಾಧನೆ ಹಲಸಂಗಿ ಗೆಳೆಯರಿಗೆ ಸಲ್ಲುತ್ತದೆ. ಪಿ.ಧೂಲಾ ಸಾಹೇಬ ಮತ್ತು ಸಿಂಪಿ ಲಿಂಗಣ್ಣನವರ ‘ಜೀವನ ಸಂಗೀತ’ ಲಾವಣಿಗಳ ಮೊದಲ ಸಂಗ್ರಹವಾಗಿದೆ. 1919ರಲ್ಲಿ ಜರುಗಿದ 5ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹನುಮಂತಗೌಡರು ‘ಲಾವಣಿಗಳು’ ಎಂಬ ವಿಷಯವಾಗಿ ಒಂದು ಲೇಖನ ಓದಿ ‘ಹೈದರಾಬಾದಿನ ಲಾವಣಿ ಪದ’ ಎಂಬ ನಾಲ್ಕು ಪುಟಗಳ ಲಾವಣಿ ಕೊಟ್ಟಿದ್ದಾರೆ. ಅನಂತರ 1923ರಲ್ಲಿ ವಿಜಯಪುರದಲ್ಲಿ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಹಳ್ಳಿಯ ಹಾಡುಗಳು’ ಎಂಬ ಲೇಖನವನ್ನೋದಿದ ಮಧುರಚೆನ್ನರು ಆ ಲೇಖನದಲ್ಲಿ ಒಂದು ಲಾವಣಿಯನ್ನೇ ಉದಾಹರಿಸಿದ್ದಾರೆ. ಅದೇ ಸಮ್ಮೇಳನದಲ್ಲಿ ಪಿ.ಧೂಲಾ ಸಾಹೇಬರು ‘ಲಾವಣಿಯ ಲಾವಣ್ಯ’ ಎಂಬ ಲೇಖನವನ್ನೋದಿದ್ದುದು ಒಂದು ಉಲ್ಲೇಖನೀಯ ಅಂಶವಾಗಿದೆ. 1925ರಲ್ಲಿ ಮಾಸ್ತಿಯವರು ‘ಕನ್ನಡ ಲಾವಣಿ ಸಾಹಿತ್ಯ’ ಎಂಬ ಲೇಖನವನ್ನು ಸಾಹಿತ್ಯ ಪರಿಷತ್ ಪತ್ರಿಕೆಯಲ್ಲಿ ಬರೆದರು. ಹೀಗೆ ‘ಲಾವಣಿ’ಗಳ ವಿಷಯಕ್ಕೆ ಆಸಕ್ತಿ ಹುಟ್ಟಿಸುವ ಕಾರ್ಯವೇನೋ ನಡೆಯಿತು. ಆದರೆ ಯಾರೂ ಒಂದು ಸಂಗ್ರಹವನ್ನು ಕೊಡುವ ಸಾಹಸ ಮಾತ್ರ ಮಾಡಲಿಲ್ಲ. ಅದನ್ನು ಮೊಟ್ಟಮೊದಲಿಗೆ ಮಾಡಿದವರೆಂದರೆ ಹಲಸಂಗಿ ಗೆಳೆಯರು. ಈ ಮೂಲಕ ಕನ್ನಡ ನವೋದಯ ಕಾವ್ಯದ ಆರಂಭಕ್ಕೆ ಹಲಸಂಗಿ ಕೇಂದ್ರದಿಂದ ನಡೆದ ಈ ಕೆಲಸ ಕನ್ನಡದ ಹೊಸಕಾವ್ಯವನ್ನು ರೂಪಿಸುವಲ್ಲಿ ಎಲ್ಲ ಬಗೆಯ ಅವಕಾಶಗಳನ್ನು ಸಜ್ಜು ಮಾಡಿಕೊಟ್ಟಿತು.

ಗರತಿಯ ಹಾಡು :

ಕನ್ನಡ ಜನಪದ ಗೀತ ಸಂಕಲನ ಮೊಟ್ಟಮೊದಲ ಕೃತಿಯಾದ ‘ಗರತಿಯ ಹಾಡು’,ಇದರಂಥದು ಇನ್ನೊಂದಿಲ್ಲವೆನ್ನುವಷ್ಟು ಅದ್ವಿತೀಯವಾದುದು. ಇದು ಕನ್ನಡ ಕಾವ್ಯ ಕ್ಷೇತ್ರದಲ್ಲಿ ಉಂಟುಮಾಡಿದ ತೀವ್ರತರವಾದ ಸೆಳೆತ ದಾಖಲಾರ್ಹವಾದುದು. ಹಲಸಂಗಿ, ಚಡಚಣ, ಸಾಲೋಟಗಿ, ಇಂಡಿ ಮೊದಲಾದ ಈ ಪರಿಸರದ ಹಳ್ಳಿಗಳಲ್ಲಿ ಜನಪದ ಹಾಡುಗಳನ್ನು ದಣಿವಿಲ್ಲದೆ ಹಾಡುವ ಹೆಣ್ಣು ಮಕ್ಕಳನ್ನು ಮುಂದೆ ಕುಳ್ಳಿರಿಸಿಕೊಂಡು ಹಲಸಂಗಿ ಗೆಳೆಯರು ಹಾಡಿಸಿ ಬರೆದುಕೊಂಡರು. ಹೀಗೆ ರೂಪಿತವಾದುದೇ ‘ಗರತಿಯ ಹಾಡು.’ ಇದರ ಸಂಗ್ರಾಹಕರು ಹಲಸಂಗಿಯ ಚೆನ್ನಮಲ್ಲಪ್ಪ, ಲಿಂಗಪ್ಪ, ರೇವಪ್ಪ ಮೊದಲಾದ ಗೆಳೆಯರು. ಅಂದರೆ ಮಧುರಚೆನ್ನ, ಸಿಂಪಿ ಲಿಂಗಣ್ಣ, ರೇವಪ್ಪ ಕಾಪಸೆ ಅವರು.

ಗರತಿಯ ಹಾಡು’ ಸಂಗ್ರಹದಲ್ಲಿರುವ ಸುಮಾರು 800 ತ್ರಿಪದಿಗಳು ಜನಪದ ತಾಯಂದಿರ ಕಲ್ಪಿತ ಶಕ್ತಿಗೆ, ಅನುಭವಕ್ಕೆ, ಬದುಕಿನ ವಿವಿಧ ಬಗೆಯ ಸಂದರ್ಭಗಳಿಗೆ ಹಿಡಿದ ಕನ್ನಡಿಗಳಾಗಿವೆ. ವಿಜಯಪುರ ಜಿಲ್ಲೆಯ ಭಾಷಿಕ ಸೊಗಡು ಇಲ್ಲಿ ಹೆಪುಗಟ್ಟಿದೆ. ಇಲ್ಲಿಯ ಹಾಡುಗಳನ್ನು ಅವುಗಳ ವಿಷಯ ವಸ್ತುಗಳ ಹಿನ್ನೆಲೆಯಲ್ಲಿ ವರ್ಗೀಕರಿಸಿಕೊಟ್ಟಿದ್ದಾರೆ. ಪರಂಪರೆ, ಸ್ತುತಿ, ತವರುಮನೆ ತಾಯ್ತಂದೆ, ಅಣ್ತಮ್ಮರೂ ಅಕ್ಕತಂಗಿಯರೂ ಅತ್ತಿಗೆ ನಾದಿನಿಯರೂ, ಗೆಳತಿ, ಅತ್ತೆಯ ಮನೆಯ ಕಷ್ಟ, ಮನಸ್ತಾಪ, ಸತಿಪತಿ ಇತ್ಯಾದಿ ಶೀರ್ಷಿಕೆಗಳಲ್ಲಿ ಸರಿಜೋಡಿಸಿ ಇಂಥ ಸಂಗ್ರಹಗಳ ವಿಧಾನವನ್ನು ತಾವೇ ರೂಪಿಸಿ ಮುಂದಿನ ಸಂಗ್ರಾಹಕರಿಗೆ ಮಾರ್ಗ ತೋರಿಸಿದ್ದಾರೆ. ಬಿ.ಎಂ.ಶ್ರೀ., ಬೇಂದ್ರೆ ಮತ್ತು ಮಾಸ್ತಿ ಅವರು ಈ ಪ್ರತಿಷ್ಠಿತ ಜನಪದ ಗೀತ ಸಂಕಲನಕ್ಕೆ ಮೌಲಿಕವಾದ ಪ್ರಸ್ತಾವನೆ, ಪರಿಚಯ, ಮುನ್ನುಡಿ ಬರೆದು ತೂಕ ಹೆಚ್ಚಿಸಿದ್ದಾರೆ. ಅದುವರೆಗಿನ ಕನ್ನಡ ಸಾಹಿತ್ಯದಲ್ಲಿ ಜನಪದ ಸಾಹಿತ್ಯ ಕುರಿತು, ವ್ಯಕ್ತವಾಗಿದ್ದ ಹೀಗಳಿಕೆಯ ಮಾತುಗಳನ್ನು ಮೊಟ್ಟಮೊದಲಬಾರಿಗೆ ‘ಇಕ್ಕಿ ಮೆಟ್ಟಿದ’ ಬಿ.ಎಂ.ಶ್ರೀ ಅವರು ‘ಮೊದಲು ಹುಟ್ಟಿದುದು ಜನವಾಣಿ, ಅದು ಬೆಳೆದು ಪರಿಷ್ಕøತವಾಗಿ ವೃದ್ದಿಯಾದುದು ಕವಿವಾಣಿ. "ಜನವಾಣಿ ಬೇರು: ಕವಿವಾಣಿ ಹೂವು" ಎಂದು ಸಾರಿದರು.ಹಾಡುತ್ತ, ಕಲಿಯುತ್ತ ಮುಂದಿನ ಪೀಳಿಗೆಗೆ ಬೆಳೆದು ಉಳಿದುಕೊಂಡು ಬಂದ ಈ ಪದಗಳು ಜನಸಾಮಾನ್ಯರ ನಾಲಗೆಯ ಮೇಲೆ ನಲಿದಾಡುವ ಭಾರತೀಯ ಸಂಸ್ಕøತಿಯ ಪರಂಪರೆಯ ಕಿಡಿನುಡಿಗಳಾಗಿವೆ.

ಬ್ಯಾಸಗಿ ದಿವಸಕ ಬೇವಿನ ಮರತಂಪ ತವರ ಮನಿಯಾ ದೀಪ ತವರೇರಿ ನೋಡೇನ ನಾರಿ ಕಣ್ಣಿನ ನೀರ ಬಾರಿ ಬೀಜಿನ್ಹಾಂಗ ಗೆಳೆತನ ಕೂಡಿದರ ಗೆಜ್ಜಿ ಜೋಡಿಸಿದ್ಹಾಂಗ ಅರಸ ಒಳ್ಳೆವರಂತ ವಿರಸವಾಡಲಿಬ್ಯಾಡ ತೊಟ್ಟೀಲದಾಗೊಂದು ತೊಳದ ಮುತ್ತನು ಕಂಡೆ ತಾಯಿದ್ರ ತವರ್ಹೆಚ್ಚು ತಂದಿದ್ರ ಬಳಗ್ಹೆಚ್ಚು ಎಲ್ಲ್ಯಾರೆ ಇರಲೆವ್ವಾ ಹುಲ್ಲಾಗಿ ಬೆಳೆಯಲಿ ಕಣ್ಣು ಮೂಗಿಲೆ ನನ್ನ ಹೆಣ್ಣು ಮಗಳು ಚೆಲುವಿ...

ಹೀಗೆ ಪ್ರತಿ ತ್ರಿಪದಿಯಲ್ಲಿ ಕಂಡುಬರುವ ಸಾಲುಗಳು ಜನಪದರ ಸಾಹಿತ್ಯಿಕ ಭಾಷೆಯ ಶ್ರೇಷ್ಠತೆಯನ್ನು ಸಾರುತ್ತವೆ. ಸರಳ, ಲಲಿತ, ಹಿತಮಿತವಾದ ನುಡಿಗಳು ಎಂಥ ಸಹೃದಯದವರನ್ನಾದರೂ ಸೆಳೆದುಕೊಳ್ಳುತ್ತವೆ. ಇಂಥ ನುಡಿ ಸಾಲುಗಳು ಮೌಖಿಕ ಕಾವ್ಯ ಶ್ರೀಮಂತಿಕೆಯಿಂದ ಕೂಡಿ ಹಾಡಿದವರ ಜೊತೆಗೇನೆ ಮರೆಯಾಗಿ ಹೋಗುತ್ತಿರುವ ಸಂದರ್ಭದಲ್ಲಿ ಇವನ್ನು ಸಂಗ್ರಹಿಸಿ ಸಂಪಾದಿಸಿಕೊಡುವ ಮೂಲಕ ‘ಹಲಸಂಗಿ ಗೆಳೆಯರು’ ಕನ್ನಡ ನಾಡಿನ ಜಾನಪದದ ಹೆಬ್ಬಾಗಿಲು ತೆರೆದುದು ಒಂದು ಐತಿಹಾಸಿಕ ಸತ್ಯವಾಗಿದೆ. ಜನಪದ ತಾಯಂದಿರು ಕೊಡುವ ಪ್ರತಿಮೆ, ಪ್ರತೀಕಗಳಿಗೆ ಎಂಥ ಶಿಷ್ಟಕವಿಯನ್ನಾದರೂ ತೀವ್ರತರವಾಗಿ ಸೆಳೆಯುವಂಥದು. ಮಗಳು ಎಂಥಾ ಚೆಲುವಿ ನಕ್ಕರೆ ತುಟಿಗೆಂಪು ಅಳಿಯ ಎಂಥವರು ನನಗ್ಹೇಳ | ಹಂಪೀಯ ವಿರುಪಾಕ್ಷಿಗಿಂತ ಚೆಲುವರು.

ಜನಪದ ಕವಿಯತ್ರಿಯರ ಹೋಲಿಕೆ, ಹಂಬಲಗಳು ತಾವು ಆರಾಧಿಸುವ ದೇವನನ್ನು ಜೊತೆ ಸೇರಿಸಿ ಕಲ್ಪಿಸುವುದು ವಿಶಿಷ್ಟವಾದುದು. ದ.ರಾ.ಬೇಂದ್ರೆಯವರು ಈ ಸಂಕಲನದ ‘ಪರಿಚಯ’ದಲ್ಲಿ ಜನಪದ ಹಾಡುಗಾರ್ತಿಯರ ಪದ ಶ್ರೇಷ್ಠತೆಯನ್ನು ಹೀಗೆ ಸಾರಿದ್ದಾರೆ. “ಜೀವನವೇ ದೇವತೆಯಾದ, ತ್ರಿಪದಿ ಛಂದದಲ್ಲಿ ಹೊರಹೊಮ್ಮಿದ ‘ಗರತಿಯ ಹಾಡಿ’ನ ಋಷಿಗಳು ಹೆಣ್ಣು ಮಕ್ಕಳು-ನಮ್ಮ ತಾಯಿ ತಂಗಿಯರು, ಅಮ್ಮ ಅಕ್ಕಂದಿರು, ಮಡದಿ ಮಕ್ಕಳು. ಹಾಗೆ ವಿಚಾರಿಸಿ ನೋಡಿದರೆ ಅವರದೇ ನಿಜವಾದ ಕಾವ್ಯ, ಉಳಿದದು ಕಾವ್ಯದ ಛಾಯೆ” ಎಂಬಲ್ಲಿ ಬೇಂದ್ರೆಯವರು ಈ ಕೃತಿಯ ಮಹತ್ತು ಸಾರಿದ್ದು ಸ್ಪಷ್ಟ ವಾಗುತ್ತದೆ.

ಕನ್ನಡ ಕವಿಗಳನ್ನು ಪ್ರಭಾವಿಸಿಕೊಂಡು ಬಂದ ‘ಗರತಿಯ ಹಾಡು’ ಉದ್ದಕ್ಕೂ ತನ್ನ ಶ್ರೇಷ್ಠತೆಯನ್ನು ಕಾಯ್ದುಕೊಂಡು ಬಂದಿದೆ. ‘ಈ ಗ್ರಂಥ ಕನ್ನಡದ ಗರತಿಯರ ಬಾಳಿನ ಅಮೃತ ಬಿಂದುಗಳನ್ನೇ ಸಂಕಲನ ಮಾಡಿದಂತಿರುವ ರೀತಿಯಲ್ಲಿ ದಿವ್ಯ ಮಾಧುರ್ಯವನ್ನು ನೀಡುತ್ತದೆ’ ಎಂದು ಜಾನಪದ ವಿದ್ವಾಂಸ ಎಲ್.ಆರ್.ಹೆಗಡೆ ಅವರು ಗುರುತಿಸಿದರೆ, ಗರತಿಯ ಹಾಡು ಕನ್ನಡದ ಪ್ರಪ್ರಥಮ ಜಾನಪದ ಕಾವ್ಯ ಸಂಕಲನವಾಗಿದ್ದು ಗುಣದ ದೃಷ್ಟಿಯಿಂದ ಕೂಡ ಇಂದಿಗೂ ಅದ್ವಿತೀಯ ಕೃತಿಯಾಗಿ ನಿಂತಿದೆ ಎಂದಿದ್ದಾರೆ ಹಿರಿಯ ವಿದ್ವಾಂಸರಾದ ಸಿ.ಪಿ.ಕೆ.ಅವರು. ಗುರುಲಿಂಗ ಕಾಪಸೆ ಅವರು ‘ಕನ್ನಡ ಜನಪದ ಸಾಹಿತ್ಯದ ಆದ್ಯ ಸಂಗ್ರಹವಾದ ಇದು ಅದ್ವೀತಿಯವಾದ ಸಂಗ್ರಹವೂ ಅಹುದು’ ಎಂದು ಅದರ ವಿಶೇಷತೆಯನ್ನು ಬಣ್ಣಿಸಿದ್ದಾರೆ. ಕೃತಿಗೆ ಆಶೀರ್ವಾದ ರೂಪದಲ್ಲಿ ಬರೆದ ಬರಹದಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ ಅವರ ಮಾತನ್ನು ಗಮನಿಸಬೇಕು. ಈ ಕೃತಿ ಮುಂದೆ ಕಾವ್ಯ ಕಟ್ಟುವ ಕವಿಗಳಿಗೆ ಮಾರ್ಗದರ್ಶಿಯಾಗಿರಲೆಂದು ಅವರು ಹೇಳಿದ್ದು ಈ ಪದಗಳು ನಮ್ಮ ಜನರೆಲ್ಲರ ಆದರವನ್ನು ಪಡೆಯಲೆಂದೂ ಇವುಗಳಿಂದ ಸಾಧ್ಯವಾದ ಎಲ್ಲ ಪ್ರಯೋಜನ ವನ್ನೂ ನಮ್ಮ ಸಾಹಿತ್ಯ ಸೇವಕರೂ ಹೊಂದಲೆಂದೂ ನಾನು ಹಾರೈಸುತ್ತೇನೆ ಎನ್ನುವಲ್ಲಿ ನವೋದಯದ ಪ್ರಾರಂಭದ ಕಾಲಕ್ಕೆ ಬರೆಯುತ್ತಿದ್ದ ಕವಿಗಳಿಗೆ ಈ ಕೃತಿ ಸ್ಪೂರ್ತಿ ನೀಡುವ ಸುಳಿವನ್ನು ಪ್ರಕಟಪಡಿಸಿದ್ದಾರೆ. ಈ ಹಾರೈಕೆ ನಿಜವೂ ಆಗಿದೆ.(ಡಾ.ಪ್ರಕಾಶ ಗ.ಖಾಡೆ ಅವರ ,ನವೋದಯ ಕಾವ್ಯದ ಮೇಲೆ ಜಾನಪದದ ಪ್ರಭಾವ ಕೃತಿಯಿಂದ)

Sunday, 21 October 2018

dollina pada 1. ಡೊಳ್ಳಿನ ಸಾಂಪ್ರದಾಯಿಕ ಪದಗಳು

ಅಪರೂಪದ  ಡೊಳ್ಳಿನ  ಸಾಂಪ್ರದಾಯಿಕ  ಪದಗಳು  ನಮ್ಮ  ಶಾಲಾ ಶಾಲಾ ಮಕ್ಕಳಿಂದ .. ,ನಮ್ಮ ಮಕ್ಕಳ ಪಯಣ  ನಮ್ಮೂರ ಜಾನಪದ ಸಿರಿಯತ್ತ ,, subscraibe  butten  ಒತ್ತಿ  ಬೆಂಬಲಿಸಿ .ಮತ್ತಷ್ಷ್ಟು  ವಿಡಿಯೋ  ಪಡೆಯಿರಿ . ( dollina padagalu . - our school chikdrence learn to our village  varaity folk songs.plz  suport.and shere this links. and subscraibe this chanel. suported by  this project  india foundation for arts

dollina pada 1. ಡೊಳ್ಳಿನ ಸಾಂಪ್ರದಾಯಿಕ ಪದಗಳು

ಅಪರೂಪದ  ಡೊಳ್ಳಿನ  ಸಾಂಪ್ರದಾಯಿಕ  ಪದಗಳು  ನಮ್ಮ  ಶಾಲಾ ಶಾಲಾ ಮಕ್ಕಳಿಂದ .. ,ನಮ್ಮ ಮಕ್ಕಳ ಪಯಣ  ನಮ್ಮೂರ ಜಾನಪದ ಸಿರಿಯತ್ತ ,, subscraibe  butten  ಒತ್ತಿ  ಬೆಂಬಲಿಸಿ .ಮತ್ತಷ್ಷ್ಟು  ವಿಡಿಯೋ  ಪಡೆಯಿರಿ . ( dollina padagalu . - our school chikdrence learn to our village  varaity folk songs.plz  suport.and shere this links. and subscraibe this chanel. suported by  this project  india foundation for arts

dollina pada 1. ಡೊಳ್ಳಿನ ಸಾಂಪ್ರದಾಯಿಕ ಪದಗಳು

ಅಪರೂಪದ  ಡೊಳ್ಳಿನ  ಸಾಂಪ್ರದಾಯಿಕ  ಪದಗಳು  ನಮ್ಮ  ಶಾಲಾ ಶಾಲಾ ಮಕ್ಕಳಿಂದ .. ,ನಮ್ಮ ಮಕ್ಕಳ ಪಯಣ  ನಮ್ಮೂರ ಜಾನಪದ ಸಿರಿಯತ್ತ ,, subscraibe  butten  ಒತ್ತಿ  ಬೆಂಬಲಿಸಿ .ಮತ್ತಷ್ಷ್ಟು  ವಿಡಿಯೋ  ಪಡೆಯಿರಿ . ( dollina padagalu . - our school chikdrence learn to our village  varaity folk songs.plz  suport.and shere this links. and subscraibe this chanel. suported by  this project  india foundation for arts

Monday, 15 October 2018

ಬೀಸುವ ಪದ ಕೇಳಿ ನಮ್ಮೂರ ಜಾನಪದ ಸಿರಿ ಮಕ್ಕಳ ತಂಡದಲ್ಲಿ



ಬೀಸುವ  ಪದ ಕೇಳಿ ನಮ್ಮೂರ ಜಾನಪದ ಸಿರಿ ಮಕ್ಕಳ ತಂಡದಲ್ಲಿ

Sunday, 14 October 2018

Banking exam successful tips

STUDY STRATEGY FOR JAIIB-LRAB.

Dear All JAIIB-CAIIB Aspirants. Last time I've Discussed (Updated) about:
1. JAIIB-CAIIB STUDY STRATEGY & PLAN
2. A SHORT STORY OF BEHIND MY JAIIB-CAIIB SUCCESS IN 1st ATTEMPT
3. 10 HABITS TO CLEAR CAIIB
4. 5 HABITS TO CRACK JAIIB-JAIIB.
5. STUDY STRATEGY FOR CAIIB-ABM & BFM.
6. STUDY STRATEGY FOR JAIIB-PPB.
7. STUDY STRATEGY FOR JAIIB-LRAB..
Dear JAIIB Aspirants.
2Day Let us discuss about Strategy for the study of LRAB (Legal & Regulatory Aspects of Banking) Subject, Which Many People finds Very Difficult to clear. If You Study Properly, It's Very Easy to Clear LRAB.

This Subject Contains 4 Modules:
MOD-A: Regulations & Compliance
MOD-B: Legal Aspects of Banking Operations
MOD-C: Banking Related Laws
MOD-D: Commercial Laws with Reference to Banking Operations.
This Subject mainly Cakewalk for LLB Graduates (Students) & Very tough even than AFB Subject, as it's full theoretical Subject.
-As We're Bankers WE get very less time for Study. So, How to decide Which Topics to be Read & Which Topics Slipped?.
IMPORTANT TOPICS FROM EACH MODULE:
1. MOD-A: REGULATIONS & COMPLIANCE
-Legal Framework
-Returns, Inspection & Mergers
-PSB & Co-Operative Banks.
This MOD is have 5 Topics & You'll learn, Constitution of Banks, What're Banks, Types of Banks, Regulator of Banks, Banking Ombudsman, Payment Systems, Etc.
Give 1st Preference to this MOD (If You want to start with Theory).
2. MOD-B: LEGAL ASPECTS OF BANKING OPERATIONS
-Borrower & Credit Facility Types
-Bank Guarantees
-Bill Finance Laws
-Reg & Satisfaction Charges.
This MOD has 14 Topics & Will discuss about Responsibilities of Bank while doing its duties & Some more important topics those will come in CAIIB.
Some Important & Easy Topics in this MOD are: Responsibities of Paying/Collecting Banks, Indemnities, Bank Guarantees, LOC (VV Important Topic in whole JAIIB-CAIIB), Types of Credit Facilities, Secured & Unsecured Loans, Etc.

MOD-C: BANKING RELATED LAWS
-SARFASI Act
-BBE Act
-Lok Adalats
-Income Tax Act.
This MOD has 21 Topics & Heart of the Subject. Because all the Laws are in this MOD.
Don't think that reading Years of Acts is sufficient. In this MOD All Topics are Very Important & Easy to Study.
Some Topics are: SARFASI Act-2002 (Introduction & Definition), Banking Ombudsman Scheme-2006, DRT Act, BBE Act-1891, LSA Act, CP Act, Tax Laws, Etc.
MOD-D: COMMERCIAL LAWS WITH REFERENCE TO BANKING OPERATIONS
-Contract Act
-N.I. Act
-BR Act
-Partnership Act
-RBI Act
-Limitation Act
-Company Act.
This MOD has 28 Topics & If You see, the 1st time You'll get Emotional Tears as it's the most heaviest of All MODs (But know a proverb 'All that Glitters isn't Gold' its easiest among all MODs). Because these Chapters are Simple & Easy to learn Topics, You can pay this MOD as 1-liner Stories.
These MOD has all the related Laws that in Topics of 2nd Subject of AFB.
Some Topics are: Contracts of Indemnity, Guarantee, Bailment, Pledge & Agency, Partnership Basics, Types of Companies, Etc.

-Overall, You've to Study ALL 4Modules in detail so as to Achieve the 70-80 Marks. You can choose the Modules to Study more depend upon Your Strength..
ALL THE VERY BEST..
WISH YOU ALL GOOD LUCK...

Saturday, 13 October 2018

boomi hunnime

ಭೂಮಿ ಹುಣ್ಣಿಮೆ ಹಬ್ಬ ಮಲೆನಾಡಿನ ರೈತರಿಗೆ ಒಂದು ವಿಶೇಷವಾದ ಹಬ್ಬ. ಪ್ರತಿ ವರ್ಷ ಆಶ್ವಯುಜ ಮಾಸದಲ್ಲಿ ಬರುವ ಸೀಗೆ ಹುಣ್ಣಿಮೆಯಂದು ರೈತರು ಭೂಮಿ ಹುಣ್ಣಿಮೆ ಹಬ್ಬವನ್ನು ಆಚರಿಸುತ್ತಾರೆ. ಅಂದು ದೇಶದೆಲ್ಲೆಡೆ ವಾಲ್ಮೀಕಿ ಜಯಂತಿಯನ್ನೂ ಆಚರಿಸಲಾಗುತ್ತದೆ ಆದರೆ ಮಲೆನಾಡು ಭಾಗದ ರೈತರಿಗೆ ಆ ದಿನ ಭೂತಾಯಿಯ ಸೀಮಂತದ ದಿನ. ಸಾಮಾನ್ಯವಾಗಿ ಜೇಷ್ಠ-ಆಷಾಡದಲ್ಲಿ ನಾಟಿ ಮಾಡಿದ ಬತ್ತದ ಪೈರು ಹಾಗೂ ಇನ್ನಿತರ ಬೆಳೆಗಳು ಈ ಸಂದರ್ಭದಲ್ಲಿ ಕಾಳುಗಟ್ಟಿರುತ್ತವೆ. ಈ ಅವಧಿಯಲ್ಲಿ ತುಂಬು ಗರ್ಭಿಣಿಯರಿಗೆ ಸೀಮಂತ ಮಾಡುವಂತೆ, ಒಡಲೊಳಗೆ ಫಸಲಿನ ಗರ್ಭ ಹೊತ್ತ ಪೈರಿಗೂ ರೈತರು ಈ ಹಬ್ಬದಂದು ಸೀಮಂತ ಮಾಡುತ್ತಾರೆ. ವಿಜಯದಶಮಿ, ಆಯುಧ ಪೂಜೆಯ ಆಚರಣೆ ಮುಗಿಯುತ್ತಿದ್ದಂತೆಯೇ ಭೂಮಣ್ಣಿ ಹಬ್ಬದ ತಯಾರಿ ಶುರುವಾಗುತ್ತದೆ. ಹಬ್ಬದ ಪ್ರಮುಖ ಆಕರ್ಷಣೆಯಾದ ಭೂಮಣ್ಣಿ ಬುಟ್ಟಿಗೆ ಹಸೆ ಚಿತ್ತಾರ ಬರೆಯಲು ಹೆಂಗಸರು ಅಣಿಯಾಗುತ್ತಾರೆ. ಭೂಮಣ್ಣಿ ಬುಟ್ಟಿ ಎಂಬುದು ಬಿದಿರಿನಿಂದ ತಯಾರಿಸಲಾದ ಒಂದು ಸಾಮಾನ್ಯ ಬುಟ್ಟಿ.ಈ ಬುಟ್ಟಿಗೆ ಹಲವು ಬಾರಿ ಗೋಮಯದಿಂದ ಸಾರಿಸಿ, ನಂತರ ಕೆಮ್ಮಣ್ಣು ಬಳಿದು ರೈತ ಮಹಿಳೆಯರು ತಮಗೆ ಪರಂಪರಾಗತವಾಗಿ ಬಂದ ಹಸೆ ಕಲೆಯ ಚಿತ್ತಾರದಿಂದ ಶೃಂಗರಿಸುತ್ತಾರೆ. ಯಾವುದೇ ರೀತಿಯ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸದೆ, ಆದುನಿಕ ಬ್ರಷ್ ಗಳನ್ನು ಬಳಸದೆ, ಕೇವಲ ನುಣ್ಣಗೆ ರುಬ್ಬಿದ ಅಕ್ಕಿ ಹಿಟ್ಟು ಮತ್ತು ಪುಂಡಿ ನಾರಿನ ಕುಂಚದಿಂದಲೇ ಬುಟ್ಟಿಯ ಮೈತುಂಬಾ ಅಂದದ ಹಸೆ ಚಿತ್ತಾರಗಳನ್ನು ಅರಳಿಸುತ್ತಾರೆ. ಹಸೆಯ ಚಿತ್ತಾರದಲ್ಲೂ ಅವರ ದೈನಂದಿನ ಕಸುಬಾದ ಕೃಷಿ ಚಟುವಟಿಕೆಗಳ ಚಿತ್ರಣವೇ ರೂಪತಳೆಯುತ್ತದೆ. ಊಳುವುದು, ಬಿತ್ತುವುದು, ಬಣವೆ ಹಾಕುವುದು, ಒಕ್ಕುವುದು ಮೊದಲಾದ ಕೃಷಿ ಚಟುವಟಿಕೆಗಳೊಂದಿಗೆ ಕಸುಬಿಕೆ ಪೂರಕವಾದ ಗಿಡ, ಮರ, ಬಳ್ಳಿ, ಪಶು, ಪಕ್ಷಿ ಮೊದಲಾದ ಪರಿಸರದ ಚಿತ್ರಗಳೂ ಭೂಮಣ್ಣಿ ಬುಟ್ಟಿಯನ್ನು ಅಲಂಕರಿಸುತ್ತವೆ